spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಟ ಶಿವರಾಮ್‌ ಆರೋಗ್ಯ ಮತ್ತಷ್ಟು ಗಂಭೀರ: ಮಿದುಳು ನಿಷ್ಕ್ರಿಯ

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್​ವುಡ್ ನ ಖ್ಯಾತ ಹಿರಿಯ ನಟ ಶಿವರಾಮ್ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರಿಂದ ಶಿವರಾಮ್ ಅವರ ಹೆಲ್ತ್​ ಅಪ್​ಡೇಟ್ ಲಭ್ಯವಾಗಿದ್ದು,”ಶಿವರಾಮ್ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸದ್ಯ ಅವರ ಆರೋಗ್ಯ  ಗಂಭೀರ ಸ್ಥಿತಿ ತಲುಪಿದೆ. ಮಿದುಳು ನಿಷ್ಕ್ರಿಯಗೊಂಡಿದ್ದು,  ಈಗಾಗಲೇ ಅವರು ಕೋಮಾ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ವಿಚಾರದಲ್ಲಿ ಮಿರಾಕಲ್​ ಆಗಬೇಕು” ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಶಿವರಾಮ್ ಅವರಿಗೆ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮನೆಯಲ್ಲಿ ರೂಮಿನಲ್ಲಿದ್ದ ವೇಳೆ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆಯಿಂದ ರಕ್ತಸ್ರಾವವಾಗಿತ್ತು. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಅವರನ್ನು ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಗೆ  ದಾಖಲಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss