ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್: ಮನೆಗೆ ವಾಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಅನಾರೋಗ್ಯದ ಕಾರಣದಿಂದಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್, ಇಂದು ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ದಿನ ಆಸ್ಪತ್ರೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆದಿದ್ದರು.

ಶಿವಣ್ಣ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ.

ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ (Shivaraj Kumar) ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ (hospital) ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!