Monday, August 8, 2022

Latest Posts

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾದ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್: ಹೆಚ್ಚಿದ ಕುತೂಹಲ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ಡಿಕೆಶಿ ನಿವಾಸದಲ್ಲಿಯೇ ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು.

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ, ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇದೀಗ ಶಿವರಾಜ್ ಕುಮಾರ್ ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಡಿಕೆಶಿ ಬಳಿ ಚರ್ಚಿಸಲು ಬಂದಿದ್ದರು ಎಂಬ ವದಂತಿ ಹರಡುತ್ತಿದೆ.

ಈ ಬಗ್ಗೆ ಶಿವರಾಜ್ ಕುಮಾರ್ ಸ್ವಷ್ಟ ಪಡಿಸಿದ್ದು, ರಾಜಕೀಯವಾಗಿ ಮಾತನಾಡಲು ಹೋಗಿರಲಿಲ್ಲ, ಇದೊಂದು ಸೌಜನ್ಯ ಭೇಟಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss