spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಮ್ (83) ಅವರು ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಈ ಬಗ್ಗೆ ಶಿವರಾಮ್ ಅವರ ಪುತ್ರ ಲಕ್ಷ್ಮೀಶ ಮಾತನಾಡಿ, ತಂದೆ ಇನ್ನಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
ಅನೇಕ ದಿಗ್ಗಜರು, ಅಭಿಮಾನಿಗಳು ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದಿಸಿ, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಯಾವ ಪ್ರಾರ್ಥನೆಯೂ ಫಲಿಸಲಿಲ್ಲ.
ಕನ್ನಡದಲ್ಲಿ ಹಲವಾರು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಶಿವರಾಮ್ ಅವರು ಅಭಿನಯ ಮಾಡಿದ್ದರು. ಇತ್ತೀಚೆಗಷ್ಟೇ ಶಿವರಾಮ್ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಿನ ಕಾರಣ ಶಸ್ತ್ರಚಿಕಿತ್ಸೆ ಮಾಡುವುದು ಅಸಾಧ್ಯವಾಗಿತ್ತು.
ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಕಾಲ ನೂರಾರು ಸಿನಿಮಾಗಳಲ್ಲಿ ಶಿವರಾಮ್ ಅವರು ಅಭಿನಯ ಮಾಡಿದ್ದರು. ಪೋಷಕ ನಟನಾಗಿ, ಹಾಸ್ಯನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿಯೂ ಕೊಡುಗೆ ನೀಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss