Sunday, April 18, 2021

Latest Posts

‘ಮದಗಜ’ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಟ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರೀಕರಣ ಸಂದರ್ಭದಲ್ಲಿ ಅವಘಡ ಉಂಟಾಗಿದೆ.ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರುಳಿ ಅವರಿಗೆ ಪೆಟ್ಟಾಗಿದ್ದು, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಲಾಗಿದೆ.
ಸಾಹಸ ದೃಶ್ಯದ ಚಿತ್ರೀಕರಣ ನಡೆಯುವ ಸಂದರ್ಭದಲ್ಲಿ ಶ್ರೀಮುರಳಿ ಆಯತಪ್ಪಿ ಬಿದ್ದು ಕಾಲಿಗೆ ಗಾಯವಾಗಿದೆ. ಚಿಕಿತ್ಸೆ ನೀಡಿದ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
‘ರಾಬರ್ಟ್’ ಖ್ಯಾತಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಿರ್ಮಾಣದಲ್ಲಿ, ಮಹೇಶ್ ಕುಮಾರ್ ನಿರ್ದೇಶನದಲ್ಲಿ ‘ಮದಗಜ’ ಮೂಡಿಬರುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss