ನಟ ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ಸಾವು ಆಕಸ್ಮಿಕ: ಸಿಬಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್​ನ ದಿ.ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವು ಆಕಸ್ಮಿಕ ಎಂದು ಸಿಬಿಐ ತಿಳಿಸಿದೆ.

ದಿಶಾ ಸಾಲಿಯಾನ್ ಸೆಲೆಬ್ರಿಟಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇವರು ಕೆಲವು ಸೆಲೆಬ್ರಿಟಿಗಳ ಜೊತೆ ಕೆಲಸ ಮಾಡಿದ್ದು, ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್​ ಆಗಿ ಖ್ಯಾತಿ ಪಡೆದಿದ್ದರು.

2020ರ ಜೂನ್ 9ರಂದು ದಿಶಾ ಸಾಲಿಯಾನ್​ ಅವರು ಮಲಾಡ್​​ನ ಕಟ್ಟಡದ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಪೊಲೀಸರು ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಸದ್ಯ ತನಿಖೆ ನಡೆಸಿರುವ ಸಿಬಿಐ ಸಾವು ಆಕಸ್ಮಿಕ ಎಂದು ವರದಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!