February 3, 2026
Tuesday, February 3, 2026
spot_img

ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ.

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು.

ನಿನ್ನೆ ಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಹುಡುಗಿ ಯಾರು?
ಉಗ್ರಂ ಮಂಜು ಕೈ ಹಿಡಿದ ಹುಡುಗಿ ಹೆಸರು ಸಾಯಿ ಸಂಧ್ಯಾ. ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ.

ಮಂಜು ‘ಉಗ್ರಂ’ ಸಿನಿಮಾದಿಂದ ಖ್ಯಾತಿ ಪಡೆದಿದ್ದು ಹಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಖ್ಯಾತಿ ಪಡೆದಿದ್ದಾರೆ. ಕಿರಿಕ್ ಪಾರ್ಟಿ, ಹೀರೋ, ಕಿಡಿ, ಕಿರೀಟ, ರಾನಿ, ದೂರದರ್ಶನ ಸಿನಿಮಾಗ ಳಲ್ಲಿ ನಟಿಸಿದ್ದರು. ಅಷ್ಟೇ ಅಲ್ಲದೆ ಮ್ಯಾಕ್ಸ್ ಸಿನಿಮಾದಲ್ಲಿ ಉಗ್ರಂ ಮಂಜು ಸೂಪರ್ ಆಗಿ ಆ್ಯಕ್ಟ್ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !