ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕುಂದಾಪುರದ ತಮ್ಮ ಕುಲದೇವರಾದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಇಂದು ನಿರ್ದೇಶಕ, ನಟ ಉಪೇಂದ್ರ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ರಿಯಲ್ ಸ್ಟಾರ್ ಉಪೇಂದ್ರ ನಟಸಿ, ನಿರ್ದೇಶನ ಮಾಡಿರುವ UI ಸಿನಿಮಾ ಯಶಸ್ಸು ಕಂಡಿದೆ. ಈ ಸಕ್ಸಸ್ ಬೆನ್ನಲ್ಲೇ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ತಂಡದ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.
ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ ಕೆ. ಎಸ್ ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಜೊತೆಗೆ ಆಡಳಿತ ಮಂಡಳಿಯ ಸದಸ್ಯರಾದ ಕೆ. ಅನಂತಪದ್ಮನಾಭ ಐತಾಳ ಉಪಸ್ಥಿತರಿದ್ದರು.
ಉಪೇಂದ್ರ, ಲಹರಿ ವೇಲು ಸೇರಿದಂತೆ ಅನೇಕರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಬಳಿಕ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌ಗೆ ಫೋಟೋಗೆ ನಟ ಪೋಸ್ ನೀಡಿದ್ದಾರೆ.