ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆ ರಾಜ್ಯ ಸರಕಾರ ಲಾಕ್ ಡೌನ್ ವಿಧಿಸಿದೆ. ಈ ವೇಳೆ ಅನೇಕ ಸಿನಿಮಾ ತಾರೆಯರು ಕಷ್ಟದಲ್ಲಿ ಇರುವ ಜನರಿಗೆ ಊಟ ಕೊಡುವ ಕೆಲಸ ಮಾಡುತ್ತಿದ್ದಾರೆ.
ಸಿನಿಮಾ ನಂಬಿಕೊಂಡು ಜೀವನ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಇಲ್ಲದೆ, ಸಿನಿಮಾ ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕಷ್ಟ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಸಿನಿಮಾ ಕಾರ್ಮಿಕರ ಸಹಾಯಕ್ಕೆ ಬಂದಿದ್ದಾರೆ.
‘ಕನ್ನಡ ಚಲನಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಗಳಿಗೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ಥರನ್ನು ಸಂಪರ್ಕಿಸಿ’ ಅಂತಾ ಉಪೇಂದ್ರ ಹೇಳಿದ್ದಾರೆ.