ನಟ ಉಪೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಸ್ವಲ್ಪ ಹೊತ್ತು ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹಾಗಾಗಿ ಅವರನ್ನು ಕೆಲವೇ ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಿ, ಮನೆಗೆ ಕಳಿಸಲಾಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಓವರ್ ಆ್ಯಸಿಡಿಟಿ ಉಂಟಾಗಿದ್ದರಿಂದ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಂತ ಅವರಿಗೆ ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ‘ಯುಐ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಉಪೇಂದ್ರ ಅವರು ಇದೇ ಸಮಸ್ಯೆ ಎದುರಿಸಿದ್ದರು.

ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಉಪೇಂದ್ರ ಅವರು ಮನೆಗೆ ಮರಳಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದರಿಂದ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!