ನಟ ವಿಜಯ್‌ ದೇವರಕೊಂಡ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಟಾಲಿವುಡ್ ನಟ ವಿಜಯ್ ದೇವರಕೊಂಡ ಕೆಲವೇ ದಿನಗಳಲ್ಲಿ ‘ಕಿಂಗ್‌ಡಮ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ. ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಪ್ರಸ್ತುತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನು ತಿಳಿದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ವಿಜಯ್ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಡೆಂಗ್ಯೂ ಆದಾಗ ಬಿಳಿ ರಕ್ತ ಕಣದಲ್ಲಿ ಸಾಕಷ್ಟು ಇಳಿಕೆ ಕಾಣುತ್ತದೆ. ಇದು ಜೀವಕ್ಕೂ ಅಪಾಯ ತಂದೊಡ್ಡಬಹುದು. ಹೀಗಾಗಿ, ವಿಜಯ್‌ಗೆ ಸಾಕಷ್ಟು ವಿಶ್ರಾಂತಿ ಬೇಕು ಎಂದು ವೈದ್ಯರು ಹೇಳಿದ್ದಾರೆ. ಈ ತಿಂಗಳ 20ರಂದು ವಿಜಯ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವರದಿ ಆಗಿದೆ. ಅವರ ತಂಡ ಅಥವಾ ಕುಟುಂಬ ಸದಸ್ಯರು ವಿಜಯ್ ದೇವರಕೊಂಡ ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!