‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ನಿರ್ಣಯ ಅಂಗೀಕರಿಸಿದ ನಟ ವಿಜಯ್ ಪಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ವಿಜಯ ದಳಪತಿ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಜಿಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಮೊದಲ ಸಭೆ ನಡೆಸಿದ್ದು,, 26 ನಿರ್ಣಯಗಳನ್ನು ಅಂಗೀಕರಿಸಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ವಿರೋಧ ವ್ಯಕ್ತಪಡಿಸಿರುವ ಅವರು, ನೀಟ್‌ ಪರೀಕ್ಷೆ ರದ್ದುಗೊಳಿಸುವ ಬೇಡಿಕೆಯನ್ನು ಬೆಂಬಲಿಸಿದೆ.

ಈವೇಳೆ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಟಿವಿಕೆ, ‘ಜಾತಿ ಸಮೀಕ್ಷೆ ನಡೆಸುವಂತೆ, ಪರಂದೂರು ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಡುವಂತೆ ಮತ್ತು ಮದ್ಯದಂಗಡಿಗಳನ್ನು ಸಮಯಕ್ಕೆ ಸರಿಯಾಗಿ ಮುಚ್ಚುವಂತೆ’ ಒತ್ತಾಯಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧವೂ ಅಸಮಾಧಾನ ಹೊರಹಾಕಿರುವ ಟಿವಿಕೆ, ಜಂಟಿ ಸಂಸದೀಯ ಸಮಿತಿ ಮುಂದಿರುವ ‘ವಕ್ಫ್‌ ತಿದ್ದುಪಡಿ ಮಸೂದೆ-2024’ ಅನ್ನು ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಎಂದು ಕರೆದಿದೆ. ಅಲ್ಲದೇ ಅದನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದೆ.

‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪದ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿರುವ ಟಿವಿಕೆ, ಪ್ರಜಾಪ್ರಭುತ್ವದ ಧೋರಣೆಗಳಿಗೆ ವಿರುದ್ಧವಾಗಿ ಅದನ್ನು ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಅನುಮಾನಿಸಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌) ರದ್ದುಗೊಳಿಸುವ ಬೇಡಿಕೆಯನ್ನು ಬೆಂಬಲಿಸಿರುವ ಪಕ್ಷ, ಶಿಕ್ಷಣವನ್ನು ಸಂವಿಧಾನದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದೆ.

‘ಜ್ಯಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯ’ ಪಕ್ಷದ ಸಿದ್ದಾಂತವಾಗಿದ್ದು, ನಮ್ಮ ಪಕ್ಷ ತಮಿಳುನಾಡಿನ ಜನರ ಸಾಮರಸ್ಯ ಮತ್ತು ಐಕ್ಯತೆಗೆ ಬದ್ಧವಾಗಿದೆ ಎಂದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!