ಇಂದು ಸ್ಪಂದನಾ ಅಂತ್ಯಕ್ರಿಯೆ: ಮಧ್ಯಾಹ್ನದವರೆಗೂ ಅಂತಿಮ ದರುಶನಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಅಕಾಲಿಕವಾಗಿ ನಿಧನರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ.

ಬ್ಯಾಂಕಾಕ್ ಪ್ರವಾಸದ ವೇಳೆ ಸ್ಪಂದನಾ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದೆ. ಬಳಿಕ ಆ್ಯಂಬುಲೆನ್ಸ್​ ಮೂಲಕ ಮಲ್ಲೇಶ್ವರಂನ ಸ್ಪಂದನಾ ತವರು ಮನೆಗೆ ಮೃತದೇಹ ರವಾನೆ ಮಾಡಲಾಗಿದೆ.

ಅಂತಿಮ ದರುಶನ:

ಸ್ಪಂದನಾ ತಂದೆ ಬಿ.ಕೆ ಶಿವರಾಮ್​ ನಿವಾಸದಲ್ಲಿ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಂತಿಮ ದರ್ಶನ ಆರಂಭವಾಗಿದ್ದು, ಇಂದು ಮಧ್ಯಾಹ್ನ 2 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!