Sunday, December 3, 2023

Latest Posts

ಕಾವೇರಿ ಹೋರಾಟದ ನಡುವೆ ಬಿಡುಗಡೆಗೆ ಸಿದ್ಧವಾಗಿದೆ ನಟ ವಿಜಯ್ ‘ಲಿಯೋ’ ಸಿನಿಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಒಂದೆಡೆ ಕಾವೇರಿ (Cauvery) ನದಿ ನೀರಿನ ಹೋರಾಟ ಹೆಚ್ಚುತ್ತಿದ್ದು,ಈ ನಡುವೆ ತಮಿಳು ಸಿನಿಮಾ ‘ಲಿಯೋ’ ಬಿಡುಗಡೆಗೆ ಸಿದ್ಧವಾಗಿದೆ. ಕನ್ನಡದಲ್ಲೂ ಬಿಡುಗಡೆ ಆಗುತ್ತಾ ಎನ್ನುವ ಅನುಮಾನ ಶುರುವಾಗಿದೆ.

ತಮಿಳಿನ ಖ್ಯಾತ ನಟ ವಿಜಯ್ ನಟನೆಯ ಈ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಆದರೆ, ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ತಮಿಳು ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹಲವರು ಆಗ್ರಹಿಸಿದ್ದಾರೆ.

‘ಲಿಯೋ’ (Leo) ಸಿನಿಮಾವನ್ನು ಬೈಕಾಟ್ (Boycott) ಮಾಡಬೇಕು ಎನ್ನುವ ಕೂಗು ಕೇರಳದಲ್ಲಿ (Kerala) ಕೇಳಿ ಬರುತ್ತಿದೆ. ಲಿಯೋ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಬೇರೆ ಮಾಡಲಾಗುತ್ತಿದೆ. ಹೀಗಾಗಿ ಸಹಜವಾಗಿಯೇ ನಿರ್ಮಾಪಕರಿಗೆ ಆತಂಕ ಎದುರಾಗಿದೆ.

ತಮಿಳು ನಟ ವಿಜಯ್ ಮತ್ತು ಮಲಯಾಳಂ ನಟ ಮೋಹನ್ ಲಾಲ್ (Mohanlal) ಅಭಿಮಾನಿಗಳು ಯಾವಾಗಲೂ ಕಿತ್ತಾಡುತ್ತಿರುತ್ತಾರೆ. ಈ ಜೋಡಿ ನಟನೆಯ ‘ಜಿಲ್ಲಾ’ ಸಿನಿಮಾದ ಸಂದರ್ಭದಲ್ಲಿ ವಿಜಯ್ ಅಭಿಮಾನಿಯೊಬ್ಬ ಮೋಹನ್ ಲಾಲ್ ಅವರಿಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದ್ದ, ಅಲ್ಲಿಂದ ಈ ಇಬ್ಬರ ಫ್ಯಾನ್ಸ್ ವಾರ್ ಶುರುವಾಗಿತ್ತು.

‘ಲಿಯೋ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ತಮಿಳಿನ ಜನಪ್ರಿಯ ನಿರ್ದೇಶಕರಾದ ಲೋಕೇಶ್‍ ಕನಕರಾಜ್‍ ನಿರ್ದೇಶಿಸಿರುವ ‘ಲಿಯೋ’ ಚಿತ್ರದಲ್ಲಿ ‘ಇಳಯದಳಪತಿ’ ವಿಜಯ್‍, ತ್ರಿಷಾ, ಸಂಜಯ್‍ ದತ್‍, ಅರ್ಜುನ್‍ ಸರ್ಜಾ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಲಿಯೋ’ ಚಿತ್ರವು ಅಕ್ಟೋಬರ್‍ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!