June 20, 2026
Saturday, June 20, 2026
spot_img

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ದಿಢೀರ್ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್‌ವುಡ್‌ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಹಠಾತ್ ಏರುಪೇರು ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದ್ದು, ವೈದ್ಯರ ವಿಶೇಷ ತಂಡ ಚಿಕಿತ್ಸೆ ಮುಂದುವರಿಸಿದೆ.  

ಆಸ್ಪತ್ರೆಗೆ ದಾಖಲಾಗಲು ಕಾರಣವೇನು?

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಇಂದು ಮನೆಯಲ್ಲಿ ವಿನೋದ್ ಪ್ರಭಾಕರ್‌ಗೆ ಇದ್ದಕ್ಕಿದ್ದಂತೆ ರಕ್ತದೊತ್ತಡ ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದೆ. ಆರೋಗ್ಯದಲ್ಲಿ ತಕ್ಷಣದ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡಮಾಡದೆ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಕಾರ್ಡಿಯಾ ಕೇರ್ ವಿಭಾಗದಲ್ಲಿ ನಿರಂತರ ನಿಗಾ

ವಿನೋದ್ ಪ್ರಭಾಕರ್‌ನ್ನು ಸದ್ಯ ಆಸ್ಪತ್ರೆಯ ಕಾರ್ಡಿಯಾ ಕೇರ್ (ಹೃದ್ರೋಗ ಆರೈಕೆ) ವಿಭಾಗದ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದೆ. ವೈದ್ಯರು ಬೆಳಗ್ಗೆಯಿಂದಲೇ ಅವರ ಆರೋಗ್ಯದ ಮೇಲೆ ಕಣ್ಣಿಟ್ಟಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಸಿನಿಮಾ ಪ್ರಚಾರದಲ್ಲಿ ನಿರತ

ವಿನೋದ್ ಪ್ರಭಾಕರ್ ತಮ್ಮ ಬಹುನಿರೀಕ್ಷಿತ ಹಾಗೂ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ‘ಬಲರಾಮನ ದಿನಗಳು’ ಚಿತ್ರದ ಬಿರುಸಿನ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದರು. ಸತತ ಕೆಲಸ ಹಾಗೂ ಒತ್ತಡದಿಂದಾಗಿ ರಕ್ತದೊತ್ತಡದಲ್ಲಿ ಏರುಪೇರಾಗಿರಬಹುದು ಎಂದು ಅಂದಾಜಿಸಲಾಗಿದೆ. ನೆಚ್ಚಿನ ನಟ ಆಸ್ಪತ್ರೆ ಸೇರಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಕೋಟ್ಯಂತರ ಅಭಿಮಾನಿಗಳು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !