ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
11 ವರ್ಷಗಳ ಹಿಂದೆ ವಿನೋದ್ ರಾಜ್ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಅವರ ಹೃದಯಕ್ಕೆ ಸ್ಟಂಟ್ ಅಳವಡಿಸಲಾಗಿತ್ತು. ಈ ಸ್ಟಂಟ್ ಪರಿಣಾಮವಾಗಿ, ಕರುಳಿನ ಸಮಸ್ಯೆ ಎದುರಾಗಿದೆ.
ಇದೀಗ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು, ಎರಡು ದಿನಗಳಲ್ಲಿ ವಿನೋದ್ ರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.