ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್ ಮುಂದಿನ ಸಿನಿಮಾದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಇಲ್ಲಿದೆ. ನಟ ಯಶ್ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, ಸಿನಿಮಾ ಟೈಟಲ್ ಘೋಷಣೆಗೆ ಮಹೂರ್ತ ನಿಗದಿಯಾಗಿದೆ.
ಈ ಬಗ್ಗೆ ಯಶ್ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಡಿಸೆಂಬರ್ 8ರಂದು ಬೆಳಗ್ಗೆ 9:55ಕ್ಕೆ ಯಶ್ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಲಿದ್ದಾರೆ. ನಿನ್ನೆಯಷ್ಟೇ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾಯಿಸಿಕೊಂಡಿದ್ದು, ‘ಲೋಡಿಂಗ್’ ಎಂದು ಬರೆದಿರುವ ಪೋಸ್ಟರ್ ಅನ್ನು ಹಂಚಿಕೊಂಡಿದ್ದರು. ಇದೀಗ ರಾಕಿಂಗ್ ಸ್ಟಾರ್ ಸಿನಿಮಾ ಟೈಟಲ್ ಅನೌನ್ಸ್ ಮಾಡಲು ಸಜ್ಜಾಗಿದ್ದಾರೆ.
ಕೆವಿಎನ್ ಪ್ರೊಡಕ್ಷನ್ ಈ ಹೊಸ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗಾಗಿ
ಹಾಲಿವುಡ್ನ ಜನಪ್ರಿಯ ಆಕ್ಷನ್ ನಿರ್ದೇಶಕರನ್ನು ಕರೆತರಲಿದ್ದಾರೆ ಎನ್ನಲಾಗಿದೆ.
It’s time… 8th December, 9:55 AM.
Stay tuned to @KvnProductions #Yash19 pic.twitter.com/stZYBspuxY— Yash (@TheNameIsYash) December 4, 2023