Wednesday, February 28, 2024

ಬಿಗ್ ಅಪ್ಡೇಟ್ ಕೊಟ್ಟ ರಾಕಿಂಗ್ ಸ್ಟಾರ್ ಯಶ್: ಸಿನಿಮಾ ಟೈಟ‌ಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಟ ಯಶ್‌ ಮುಂದಿನ ಸಿನಿಮಾದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಇಲ್ಲಿದೆ. ನಟ ಯಶ್‌ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, ಸಿನಿಮಾ ಟೈಟಲ್‌ ಘೋಷಣೆಗೆ ಮಹೂರ್ತ ನಿಗದಿಯಾಗಿದೆ.

ಈ ಬಗ್ಗೆ ಯಶ್‌ ಟ್ವೀಟ್‌ ಮೂಲಕ ಹಂಚಿಕೊಂಡಿದ್ದಾರೆ. ಡಿಸೆಂಬರ್ 8ರಂದು ಬೆಳಗ್ಗೆ 9:55ಕ್ಕೆ ಯಶ್ ಹೊಸ ಪ್ರಾಜೆಕ್ಟ್‌ ಅನೌನ್ಸ್‌ ಮಾಡಲಿದ್ದಾರೆ. ನಿನ್ನೆಯಷ್ಟೇ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾಯಿಸಿಕೊಂಡಿದ್ದು, ‘ಲೋಡಿಂಗ್’ ಎಂದು ಬರೆದಿರುವ ಪೋಸ್ಟರ್ ಅನ್ನು ಹಂಚಿಕೊಂಡಿದ್ದರು. ಇದೀಗ ರಾಕಿಂಗ್ ಸ್ಟಾರ್ ಸಿನಿಮಾ‌ ಟೈಟಲ್‌ ಅನೌನ್ಸ್ ಮಾಡಲು ಸಜ್ಜಾಗಿದ್ದಾರೆ.

ಕೆವಿಎನ್‌ ಪ್ರೊಡಕ್ಷನ್‌ ಈ ಹೊಸ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗಾಗಿ
ಹಾಲಿವುಡ್​ನ ಜನಪ್ರಿಯ ಆಕ್ಷನ್ ನಿರ್ದೇಶಕರನ್ನು ಕರೆತರಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!