ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ನಟ ಯಶ್ ಕುಟುಂಬದೊಂದಿಗೆ ಬಂದು ಶ್ರೀಕಂಠೇಶ್ವರನ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಅವರು, ಇದು ನಮ್ಮ ದೇವರು. ಕೋವಿಡ್ ಬಳಿಕ ಇಲ್ಲಿಗೆ ಬರಲು ಆಗಲಿಲ್ಲ. ಹಾಗಾಗಿ ಕುಟುಂಬ ಸಮೇತ ಭೇಟಿ ನೀಡಿ ದರ್ಶನ ಪಡೆದಿದ್ದೇನೆ ಎಂದರು.
ಶೀಘ್ರದಲ್ಲಿ ಮುಂದಿನ ಚಿತ್ರದ ಬಗ್ಗೆ ಅನೌನ್ಸ್
ತಮ್ಮ ಮುಂದಿನ ಸಿನೆಮಾ ಬಗ್ಗೆ ಮಾತನಾಡಿದ ಯಶ್, ‘ದೇವರ ಸನ್ನಿದಿಯಲ್ಲಿ ಇದ್ದೀನಿ. ಸುಖಾ ಸುಮ್ಮನೆ ತೇಲಿಸುವ ಮಾತುಗಳನ್ನು ಆಡುವುದಿಲ್ಲ. ಜನರು ದುಡ್ಡು ಕೊಟ್ಟು ಸಿನಿಮಾ ನೋಡುತ್ತಾರೆ. ಉಚಿತವಾಗಿ ಸಿನಿಮಾ ನೋಡುವುದಿಲ್ಲ. ಅವರು ಕೊಡುವ ದುಡ್ಡಿಗೆ ನ್ಯಾಯ ಒದಗಿಸುವಂತೆ ಸಿನಿಮಾ ಮಾಡಬೇಕು. ಅದು ಈಗ ನಡೆಯುತ್ತಿದೆ’ ಎಂದರು.
ಶೀಘ್ರದಲ್ಲೇ ಹೊಸ ಚಿತ್ರದ ಬಗ್ಗೆ ಮತ್ತಷ್ಟು ವಿಷಯಗಳನ್ನು ಹೇಳುವುದಾಗಿ ತಿಳಿಸಿದರು.
ಬಾಲಿವುಡ್ ಗೆ ಹೋಗ್ತಾರಾ ಯಶ್ ?
ಯಶ್ ಬಾಲಿವುಡ್ ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿದ ಯಶ್, ʼನಾನು ಇರುವ ಕಡೆ ಎಲ್ಲರನ್ನೂ ಕರೆಸಿಕೊಂಡಿದ್ದೇನೆ, ನಾನೂ ಎಲ್ಲೂ ಹೋಗಲ್ಲ ಡೋಂಟ್ ವರಿʼ ಎನ್ನುವ ಮೂಲಕ ಅಭಿಮಾನಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.