ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಂದಿದ್ದು, ಅನೇಕ ನಟ, ನಟಿಯರು ಈ ಬಾರಿ ಚುನಾವಣಾ ಅಖಾಡದಲ್ಲಿದ್ದರು.
ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿಗೆದ್ದು ಬೀಗಿದ್ದಾರೆ.
ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್ನಿಂದ ಗೆದ್ದಿದ್ದಾರೆ.
ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿ ಗೆದ್ದು ಸಂಭ್ರಮಿಸಿದ್ದಾರೆ.
ಪಶ್ಚಿಮ ಬಂಗಾಳ ಅಸನ್ಸೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರಿ ಬಾಬು ಎಂದೇ ಖ್ಯಾತರಾಗಿರುವ ಶತ್ರುಘ್ನ ಸಿನ್ಹಾ ಟಿ ಎಂ ಸಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 63,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುರಿಂದರ್ ಸಿಂಗ್ ಅಹ್ಲುವಾಲಿಯಾ ಅವರನ್ನು ಸೋಲಿಸಿದ್ದಾರೆ.
ಮಥುರಾ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿರುವ ಹೇಮಾ ಮಾಲಿನಿ, ಈ ಬಾರಿಯೂ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿಯ ಸುರೇಶ್ ಸಿಂಗ್ ಅವರನ್ನು 106924 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಭೋಜ್ಪುರಿ ನಟ, ಗಾಯಕ ಮನೋಜ್ ತಿವಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕನ್ಹಯ್ಯ ಕುಮಾರ್ ವಿರುದ್ಧ ಭರ್ಜರಿ ಮತಗಳಿಂದ ಗೆದ್ದಿದ್ದಾರೆ.
ರಾಜಕಾರಣಿ ಹಾಗೂ ಬಿಜೆಪಿ ನಾಯಕ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಿಂದ 74,536 ಮತಗಳ ಅಂತರದಿಂದ ಗೆದ್ದಿದ್ದಾರೆ.
ಜನಪ್ರಿಯ ಭೋಜ್ಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಬಿಹಾರದ ಕಾರಕಟ್ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.