ನಟಿ ಐಂದ್ರಿಲಾ ಶರ್ಮಾಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರಿಗೆ ನವೆಂಬರ್‌ 15ರಂದು ಎರಡು ಬಾರಿ ಹೃದಯಾಘಾತವಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ನಟಿ ಇಂಟ್ರಾಕ್ರೇನಿಯಲ್ ಹೆಮರೇಜ್‌ನಿಂದ ಬಳಲುತ್ತಿದ್ದು, ನವೆಂಬರ್ 1 ರಂದು ಬ್ರೈನ್ ಸ್ಟ್ರೋಕ್ ಗೆ ಒಳಪಟ್ಟಿದ್ದರು. ಇದೀಗ ನಟಿಗೆ ಮತ್ತೆ ಹೃದಯಾಘಾತವಾಗಿದ್ದು ಹೊಸ ಸಿಟಿ ಸ್ಕ್ಯಾನ್ ವರದಿ ಪ್ರಕಾರ ನಟಿಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಆಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ಎನ್ನಲಾಗಿದೆ.

ಇದೀಗ ನಟಿಯ ಆರೋಗ್ಯ ಇನ್ನಷ್ಟು ಗಂಭೀರಗೊಂಡಿದ್ದು ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಹಿಂದೆ ಅಷ್ಟೇ ನಟಿ ಐಂದ್ರಿಲಾ ಶರ್ಮಾ ಗೆಳೆಯ ನಟ ಸಬ್ಯಸಾಚಿ ಚೌಧರಿ ಅವರು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ನಟಿಯ ಕುರಿತು ಪ್ರಾರ್ಥಿಸುವಂತೆ ಕೇಳಿಕೊಂಡಿದ್ದರು.

ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ನಟಿ ಐಂದ್ರಿಲಾ ಈ ಹಿಂದೆ ಎರಡು ಬಾರಿ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದರು. ಇದೀಗ ಮತ್ತೆ ಬ್ರೈನ್ ಸ್ಟ್ರೋಕ್‌ನಿಂದ ಬಳಲುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!