ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಅಮೂಲ್ಯ ಅವರ ಸಹೋದರ,‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳ ನಿರ್ದೇಶಕ ದೀಪಕ್ ಅಸರ್ ಅವರು ನಿಧನರಾಗಿದ್ದಾರೆ.
ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅವರು ಇಂದು (ಅ.17) ಸಂಜೆ 7 ಗಂಟೆ ಸುಮಾರಿಗೆ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ.
ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.