ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ದಿ ವಿಲನ್ ಸಿನಿಮಾದಲ್ಲಿ ನಟಿಸಿದ್ದ ಹಾಲಿವುಡ್ ನಟಿ ಏಮಿ ಜಾಕ್ಸನ್ ಇಂದು ಗಂಡುಮಗುವಿಗೆ ಜನ್ಮನೀಡಿದ್ದಾರೆ.
ಈ ಗುಡ್ ನ್ಯೂಸ್ ಅನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಮಗುವಿನ ಹೆಸರಿನ ಕೂಡ ಏಮಿ ರಿವೀಲ್ ಮಾಡಿದ್ದಾರೆ.
ಮುದ್ದಾದ ಗಂಡು ಮಗುವಿಗೆ ಏಮಿ ಮತ್ತು ಎಡ್ ವೆಸ್ಟ್ವಿಕ್ ಆಸ್ಕರ್ ಎಂದು ಹೆಸರಿಟ್ಟಿದ್ದಾರೆ. ಮಗುವನ್ನು ಹಿಡಿದುಕೊಂಡು ಪತಿಯ ಜೊತೆ ನಟಿ ಪೋಸ್ ಮಾಡಿರುವ ಪೋಸ್ಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುದ್ದಾದ ಮಗನಿಗೆ ‘ಆಸ್ಕರ್ ಅಲೆಕ್ಸಾಂಡರ್ ವೆಸ್ಟ್ವಿಕ್’ ಎಂದು ಹೆಸರಿಡಲಾಗಿದೆ.