ಭೂತಕೋಲದಲ್ಲಿ ನಟಿ ಅನುಷ್ಕಾ ಶೆಟ್ಟಿ ಭಾಗಿ: ದೇವರು ಒಳ್ಳೆಯದು ಮಾಡಲಿ ಎಂದ ಫ್ಯಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಎಷ್ಟು ದೊಡ್ಡ ನಟಿಯಾದರು ಯಶಸ್ಸು ಸಿಕ್ಕರೂ ತಮ್ಮ ಮೂಲ ಸಂಸ್ಕೃತಿಯನ್ನು ಮರೆತಿಲ್ಲ. ಮೂಲತಃ ಕರಾವಳಿಯ ಬೆಡಗಿಯಾದ ಅನುಷ್ಕಾ ಶೆಟ್ಟಿ ಅವರು ಪ್ರತಿ ವರ್ಷ ತಮ್ಮ ಕುಟುಂಬದವರ ಜೊತೆ ಸೇರಿ ಭೂತಕೋಲದಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಕೂಡ ಶೂಟಿಂಗ್‌ಗೆ ಬ್ರೇಕ್ ಹಾಕಿ, ಮಂಗಳೂರಿಗೆ ಬಂದಿದ್ದಾರೆ. ತಮ್ಮ ಮನೆಯ ಭೂತಕೋಲದಲ್ಲಿ ನಟಿ ಭಾಗಿಯಾಗಿದ್ದಾರೆ.

ಈ ಫೋಟೋ ಮತ್ತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

`ಬಾಹುಬಲಿ 2′ ಸಕ್ಸಸ್ ನಂತರ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡ ಶೆಟ್ಟಿ, ಬಳಿಕ ಯಾವುದೇ ಚಿತ್ರದಲ್ಲೂ ಕಾಣಿಸಿಕೊಳ್ಳದೇಸೈಲೆಂಟ್‌ ಆಗಿದ್ದಾರೆ. ಆದರೆ ಇದೀಗ ನವೀನ್ ಪೋಲಿ ಶೆಟ್ಟಿ ಜೊತೆ ಹೊಸ ಚಿತ್ರದ ಮೂಲಕಕಮ್‌ಬ್ಯಾಕ್ ಮಾಡ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

ಇದರ ನಡುವೆ ಊರಿಗೆ ಬಂದು ಭೂತಕೋಲದಲ್ಲಿ ನಟಿ ಭಾಗಿಯಾಗಿದ್ದು, ಭಕ್ತಿ ಭಾವದಿಂದ ವೀಕ್ಷಿಸಿದ್ದಾರೆ. ದೈವ ನರ್ತನವನ್ನು ತಮ್ಮ ಮೊಬೈಲ್​ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಟಿಯ ಭಕ್ತಿಭಾವ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದು, ಅನುಷ್ಕಾ ಶೆಟ್ಟಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹಾರೈಸುತ್ತಿದ್ದಾರೆ.
ಇತ್ತೀಚೆಗೆ ಕಾಂತಾರ ಸಿನಿಮಾ ನೋಡಿ, ಖುಷಿಯಿಂದ ಚಿತ್ರಕ್ಕೆ ಮತ್ತು ರಿಷಬ್ ಶೆಟ್ಟಿ ನಟನೆಗೆ ಅನುಷ್ಕಾ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!