ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಹಾಗೂ ಕಿರುತೆರೆಯಲ್ಲಿ ಸಕ್ರಿಯವಾಗಿದ್ದ ನಟಿ ಅಪರ್ಣಾ ನಾಯರ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಲಯಾಳಂ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಮಿಂಚಿದ್ದ ನಟಿ ಅಪರ್ಣಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನ ಮೂಡಿಸಿದೆ.
ಪೊಲೀಸರು ಇದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಿರುವನಂತಪುರದ ಮನೆಯಲ್ಲಿ ಅಪರ್ಣಾ ಮೃತದೇಹ ಪತ್ತೆಯಾಗಿದೆ. ಈ ವೇಳೆ ಮನೆಯಲ್ಲಿ ತಾಯಿ ಹಾಗೂ ಸಹೋದರಿ ಇದ್ದರು ಎನ್ನಲಾಗಿದೆ. ತಕ್ಷಣವೇ ಅಪರ್ಣಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಅಪರ್ಣಾ ಉಸಿರುಚೆಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಇದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.