ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಹೌದು, ಈ ಮಾತು ನಿಜ.. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದಾರೆ ಎಂಬುದು ವಿಶೇಷ.
ನಟಿಯಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಭಾವನಾ ಇನ್ನು ಸಿಂಗಲ್ ಜೀವನ ನಡೆಸುತ್ತಿದ್ದಾರೆ. ವೈದ್ಯಕೀಯ ತಂತ್ರಜ್ಞಾನದಲ್ಲೀಗ ಪುರುಷನ ದೈಹಿಕ ಸಂಪರ್ಕ ಇಲ್ಲದೆ ತಾಯಿಯಾಗಬಹುದು. ಹಾಗೆಯೇ ಭಾವನಾ ಕೂಡ ತಾಯಿಯಾಗುತ್ತಿದ್ದಾರೆ.
ಭರತನಾಟ್ಯ ಕಲಾವಿದೆಯಾಗಿ ಫಿಟ್ ಆಗಿರುವ ಭಾವನಾ ಇದೀಗ ಮಗು ಹೆರಲು ಸಿದ್ಧರಾಗಿದ್ದು, ಅವಳಿ ಮಕ್ಕಳನ್ನು ಪಡೆಯುತ್ತಿದ್ದಾರೆ.