ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಚಂದನಾ ಅನಂತಕೃಷ್ಣ ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ. ಮಲ್ಲೇಶ್ವರಂ ಸುತ್ತಮುತ್ತ ಚಂದನಾ ಪ್ರೀವೆಡ್ಡಿಂಗ್ ಶೂಟ್ ನಡೆದಿದ್ದು, ಫ್ಯಾನ್ಸ್ ಮೆಚ್ಚುಗೆಗೆ ಪಾತ್ರವಾಗಿತ್ತು.