CINE | ಮತ್ತೆ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ನಟಿ ಜೆನಿಲಿಯಾ ಡಿಸೋಜಾ, 13 ವರ್ಷ ಗ್ಯಾಪ್‌ ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬರೋಬ್ಬರಿ 13 ವರ್ಷಗಳ ನಂತರ ನಟಿ ಜೆನಿಲಿಯಾ ಮತ್ತೆ ಬಣ್ಣ ಹಚ್ಚೋಕೆ ತಯಾರಾಗಿದ್ದಾರೆ. ಸಿನಿಮಾ ರಂಗದಿಂದ ದೂರ ಉಳಿದಿದ್ದ ಜೆನಿಲಿಯಾ ಮತ್ತೆ ತೆಲುಗು ಸಿನಿಮಾ ಇಂಡಸ್ಟ್ರಿಗೆ ವಾಪಾಸಾಗಲಿದ್ದಾರೆ.

ಈ ಹಿಂದೆ ಸಿದ್ಧಾರ್ಥ್ ಜೊತೆ ‘ಬೊಮ್ಮರಿಲ್ಲು’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ತೆಲುಗಿನ ನಾ ಇಷ್ಟಂ, ಹ್ಯಾಪಿ, ಸೈ, ಕಿಂಗ್, ರೆಡಿ, ರಾಮ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಜೆನಿಲಿಯಾ ನಟಿಸಿದ್ದರು.

ತೆಲುಗಿನ ಸ್ಟಾರ್ ನಟನೊಬ್ಬನ ಸಿನಿಮಾದಲ್ಲಿ ಬಾಲಿವುಡ್ ನಟಿ ಜೆನಿಲಿಯಾ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ಅವರಿಗೆ ಪವರ್‌ಫುಲ್ ಪಾತ್ರವೇ ಸಿಕ್ಕಿದೆಯಂತೆ. ಯಾವ ಸ್ಟಾರ್ ನಟನ ಜೊತೆ ಜೆನಿಲಿಯಾ ನಟಿಸಲಿದ್ದಾರೆ ಎಂಬುದನ್ನು ಚಿತ್ರತಂಡ ರಿವೀಲ್ ಮಾಡುವವರೆಗೂ ಕಾಯಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!