April 4, 2026
Saturday, April 4, 2026
spot_img

ಎರಡೇ ವರುಷಕ್ಕೆ ಮುರಿದುಬಿತ್ತು ನಟಿ ಹನ್ಸಿಕಾ ಸಂಸಾರ: ಜೀವನಾಂಶ ಬೇಡವೆಂದ ‘ಬಿಂದಾಸ್’ ಬೆಡಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಮತ್ತು ಉದ್ಯಮಿ ಸೊಹೈಲ್ ಖತುರಿಯಾ ಅವರಿಗೆ ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ.

ವಿಶೇಷವೆಂದರೆ, ಹನ್ಸಿಕಾ ಅವರು ಪತಿಯಿಂದ ಯಾವುದೇ ರೀತಿಯ ಹಣ ಅಥವಾ ಜೀವನಾಂಶವನ್ನು ಪಡೆದಿಲ್ಲ.

2022ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದ ಈ ಜೋಡಿ, ಮದುವೆಯಾದ ಕೆಲವೇ ದಿನಗಳಲ್ಲಿ ಮನಸ್ತಾಪ ಎದುರಿಸಿತ್ತು. 2024ರ ಜುಲೈಯಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಇವರ ವಿವಾಹದ ಸಂಭ್ರಮವು ‘ಹನ್ಸಿಕಾಸ್ ಲವ್ ಶಾದಿ ಡ್ರಾಮಾ’ ಎಂಬ ರಿಯಾಲಿಟಿ ಶೋ ಮೂಲಕವೂ ಪ್ರಸಾರವಾಗಿತ್ತು.

ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ‘ಬಿಂದಾಸ್’ ಸಿನಿಮಾ ಮೂಲಕ ಮನೆಮಾತಾಗಿದ್ದ ಹನ್ಸಿಕಾ, ಸದ್ಯಕ್ಕೆ ತಮ್ಮ ವೃತ್ತಿಜೀವನದತ್ತ ಗಮನ ಹರಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !