ಮಗಳಿಗೆ ಮುದ್ದಾದ ಹೆಸರಿಟ್ಟ ನಟಿ ಹರ್ಷಿಕಾ- ಭುವನ್ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನಟಿ ಹರ್ಷಿಕಾ ಪೂಣಚ್ಚ ಹಾಗೂ ಬಿಗ್ ಬಾಸ್ ಸೀಸನ್ 4ರ ಸ್ಪರ್ಧಿ ಭುವನ್ ಪೊನ್ನಣ್ಣ ದಂಪತಿ ಕೊಡವ ಸಂಪ್ರದಾಯದಂತೆ ಇಂದು ವಿರಾಜಪೇಟೆಯಲ್ಲಿ ಮುದ್ದು ಮಗಳ ನಾಮಕರಣ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

ಇದೀಗ ನವರಾತ್ರಿ ಮೊದಲ ದಿನ ಜನಿಸಿದ ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ ಎಂದು ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದ್ದಾರೆ.

ಮಗಳೊಂದಿಗಿನ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರನ್ನು ದಂಪತಿ ರಿವೀಲ್ ಮಾಡಿದ್ದಾರೆ. ಕೊಡವ ಶೈಲಿಯಲ್ಲೇ ಮಗುವಿಗೆ ಉಡುಪನ್ನು ಧರಿಸಿದ್ದು ವಿಶೇಷವಾಗಿತ್ತು. ನಾಮಕರಣ ಕಾರ್ಯಕ್ರಮದಲ್ಲಿ ದಂಪತಿಯ ಕುಟುಂಬಸ್ಥರು, ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು ಭಾಗಿಯಾಗಿದ್ದಾರೆ.

ಹಿಂದೂ ಧರ್ಮದಲ್ಲಿ, “ತ್ರಿದೇವಿ” ಎಂಬುದು ಮೂರು ಪ್ರಮುಖ ದೇವತೆಗಳನ್ನು ಸೂಚಿಸುತ್ತದೆ. ಸರಸ್ವತಿ, ಲಕ್ಷ್ಮಿ ಮತ್ತು ಪಾರ್ವತಿ (ಅಥವಾ ದುರ್ಗಾ). ಅವರನ್ನು ತ್ರಿಮೂರ್ತಿಗಳ (ಬ್ರಹ್ಮ, ವಿಷ್ಣು, ಶಿವ) ಪತ್ನಿಯರೆಂದು ಪರಿಗಣಿಸಲಾಗುತ್ತದೆ ಮತ್ತು ಕ್ರಮವಾಗಿ ಜ್ಞಾನ, ಸಂಪತ್ತು/ಸಮೃದ್ಧಿ ಮತ್ತು ಶಕ್ತಿ/ಪ್ರೀತಿಯನ್ನು ಪ್ರತಿನಿಧಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!