ಶೂಟಿಂಗ್‌ ವೇಳೆ ನಟಿ ಹಿಮಾಂಶಿ ಖುರಾನಾ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ 13 ಸ್ಪರ್ಧಿ, ನಟಿ ಹಾಗೂ ಗಾಯಕಿ ಹಿಮಾಂಶಿ ಖುರಾನಾ ಮೂಗಿನ ರಕ್ತಸ್ರಾವ ಮತ್ತು ತೀವ್ರ ಜ್ವರದಿಂದ ಬಳಲುತ್ತಿರುವ ಕಾರಣ ರೊಮೇನಿಯಾದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆವರಿಗೆ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತ ಸುರಿಯಲು ಶುರುವಾಯಿತು. ಅದು ನಿಲ್ಲದೇ ಇರುವ ಕಾರಣಕ್ಕಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪಂಜಾಬಿ ಚಿತ್ರ ‘ಫಟ್ಟೊ ದೇ ಯಾರ್ ಬಡೇ ನೆ’ ಚಿತ್ರೀಕರಣದಲ್ಲಿದ್ದರು. ಮೈನಸ್ 7 ಡಿಗ್ರಿ ಸೆಲ್ಸಿಯಸ್‌ನಲ್ಲಿ ಶೂಟಿಂಗ್ ನಡೆದಿದ್ದ ಕಾರಣ ನಟಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಮೂಗಿನಿಂದ ರಕ್ತ ಸುರಿಯಲು ಶುರುವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!