ನಟಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ: ನ್ಯಾಯಾಲಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ (Jaya Prada)ತಲೆಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಘೋಷಿಸಿದೆ. ಜೊತೆಗೆ ಅವರನ್ನು ಅರೆಸ್ಟ್ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಮಪುರದಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸಮನ್ಸ್ ನೀಡಿದ ಹೊರತಾಗಿಯೂ ಜಯಪ್ರದಾ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಜಯಪ್ರದಾ ಅವರಿಗೆ ನ್ಯಾಯಾಲಯದಿಂದ ಹಲವು ಬಾರಿ ಸಮನ್ಸ್ ಜಾರಿಯಾಗಿತ್ತು. ಆದರೆ, ಇದಕ್ಕೆ ಅವರು ಉತ್ತರಿಸಿಲ್ಲ. ಹೀಗಾಗಿ ಜಯಪ್ರದಾ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಮಾರ್ಚ್ 6ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಮಪುರ ಪೊಲೀಸರಿಗೆ ಕೋರ್ಟ್ ನಿರ್ದೇಶಿಸಿದೆ.

ಮಂಗಳವಾರದ (ಫೆಬ್ರವರಿ 27) ವಿಚಾರಣೆಯಲ್ಲಿ ನ್ಯಾಯಾಲಯವು ನೇರವಾಗಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿತು. ಒಂದು ತಂಡವನ್ನು ರಚಿಸಿ ಜಯಪ್ರದಾ ಅವರನ್ನು ಮಾರ್ಚ್ 6ರಂದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯವು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!