ಗಂಡು ಮಗುವಿಗೆ ತಾಯಿಯಾದ ನಟಿ ಕಾಜಲ್​ ಅಗರ್​ವಾಲ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಭಾರತದ ಪ್ರಸಿದ್ಧ ನಟಿ ಕಾಜಲ್​ ಅಗರ್​ವಾಲ್​ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಅವರ ಸಹೋದರಿ ಟ್ವಿಟ್ಟರ್​ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಸದ್ಯ ತಾಯಿ ಮಗು ಆರೋಗ್ಯವಾಗಿದ್ದು. ನಮಗೆ ತುಂಬಾ ಖುಷಿಯಾಗಿದೆ. ನಮ್ಮ ಮನೆಗೆ ನಮ್ಮ ಮುದ್ದಾದ ಮಗು ಬಂದಿದೆ ಎಂದು ಕಾಜಲ್​ ಅವರ ತಂಗಿ ನಿಶಾ ಅಗರ್​ವಾಲ್​ ತಿಳಿಸಿದ್ದಾರೆ.
ಜನವರಿಯಲ್ಲಿ ತಾನು ಗರ್ಭಿಣಿ ಇರುವುದಾಗಿ ತಮ್ಮ ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಕಳೆದ ವರ್ಷ ಅಕ್ಟೋಬರ್​ನಲ್ಲಿ ಗೌತಮ್​ ಕೀಚ್ಲು ಎಂಬುವವರ ಜತೆ ವಿವಾಹವಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!