ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿದ ನಟಿ ಕಂಗನಾ ರಣಾವತ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿಮಾಚಲ ಪ್ರದೇಶದದ (Himachal Pradesh) ಮಂಡಿ (Mandi) ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದ ಬಗ್ಗೆ ಹಾಗೂ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿದ್ದಾರೆ.

ಈ ಮಾಹಿತಿಯನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಕೂಡ ಮಾಡಿಕೊಂಡಿದ್ದಾರೆ.

ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿನ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಕೂಡ ಆಡುತ್ತಿದ್ದಾರೆ.

ಇಂದಿನಿಂದ ಮಂಡಿ ಕ್ಷೇತ್ರದಾದ್ಯಂತ ನಟಿ ಪ್ರವಾಸ ಮಾಡಲಿದ್ದಾರೆ. ಇಂದು ಮಂಡಿ ಕ್ಷೇತ್ರದ ಮುಖಂಡರ ಜೊತೆ ಭೇಟಿಗಳು ನಿಗದಿ ಆಗಿವೆ. ಅಧಿಕೃತವಾಗಿ ಸಕ್ರೀಯ ರಾಜಕಾರಣದಲ್ಲಿ ಕಂಗನಾ ಇರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!