ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕಗೊಂಡಿದ್ದಾರೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ.
ಅವರ ನೇಮಕಾತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ.
ಬಿಜೆಪಿ ಉಪಾಧ್ಯಕ್ಷೆಯಾಗಿ ಆಯ್ಕೆ ಆಗಿರುವ ಬಗ್ಗೆ ಖುಷ್ಬೂ ಸುಂದರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಪ್ರಧಾನಿ ಮೋದಿ ಹಾಗೂ ಜೆ.ಪಿ ನಡ್ಡಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.