ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಮಾನ್ವಿತಾ ಕಾಮತ್ -ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರ ವಿವಾಹ ಇಂದು ಕಳಸದ ದೇಗುಲದಲ್ಲಿ ನೆರವೇರಿದೆ.
ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಜೋಡಿ ಹಸೆಮಣೆ ಏರಿದ್ದು, ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮದುವೆಗೆ ಆಗಮಿಸಿ ಶುಭ ಕೋರಿದ್ದಾರೆ.