SHOCKING NEWS ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ವಿಧಿವಶ

ಹೊಸದಿಗಂತ ಆನ್‌ಲೈನ್ ಡೆಸ್ಕ್:
ಬಹುಭಾಷಾ ನಟಿ ಮೀನಾ ಅವರ ಪತಿ, ಸಾಫ್ಟ್‌ವೇರ್ ಇಂಜಿನಿಯರ್ ವಿದ್ಯಾಸಾಗರ್  ನಿಧನರಾಗಿದ್ದಾರೆ.
ಶ್ವಾಸಕೋಶ ಸಂಬಂಧಿಸಿ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕನ್ನಡ ಸೇರಿದಂತೆ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿರುವ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು. ಈ ದಂಪತಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ.
ಮೀನಾ ಅವರ ಪತಿಯ ನಿಧನಕ್ಕೆ ಹಿರಿಯ ನಟ ಶರತ್ ಕುಮಾರ್ ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಸಂತಾಪಗಳು ಹರಿದುಬರುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!