ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದ ಕಪಾಳಮೋಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ .

ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

https://x.com/theprayagtiwari/status/1798683682322227220?ref_src=twsrc%5Etfw%7Ctwcamp%5Etweetembed%7Ctwterm%5E1798683682322227220%7Ctwgr%5E8d89e6d9490f95fc6c14f035857cec32fa7e8f3c%7Ctwcon%5Es1_&ref_url=https%3A%2F%2Fvistaranews.com%2Fvistara%2Fkangana-ranaut-alleges-cisf-official-slapped-her-at-chandigarh-airport%2F668877.html

ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!