ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ (Nayana) ಹೆಣ್ಣು ಮಗುವಿಗೆ (Baby girl) ಜನ್ಮ ನೀಡಿದ್ದಾರೆ.
ಪತಿ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ನಯನಾ, ಮಗುವಿಗೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.
ಹುಬ್ಬಳ್ಳಿಯ (Hubli) ಸಾಮಾನ್ಯ ಹುಡುಗಿ ನಯನಾ ಅವರು ಯಾವುದೇ ಬ್ಯಾಕ್‌ಗ್ರೌಂಡ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋ ಎಂಟ್ರಿ ಕೊಟ್ಟು ತಾವು ಎಂತಹ ಪ್ರತಿಭಾನ್ವಿತ ಕಲಾವಿದೆ ಎಂದು ತೋರಿಸಿಕೊಟ್ಟರು.
ಕಳೆದ ಮೂರು ವರ್ಷಗಳ ಹಿಂದೆ ಶರತ್ (Sharath) ಎಂಬುವವರ ಜೊತೆ ನಯನಾ ಸರಳವಾಗಿ ಮದುವೆಯಾದರು. ಈಗ ಮೊದಲ ಮಗುವಿನ ಬರಮಾಡಿಕೊಂಡಿದ್ದಾರೆ. ಮನೆಗೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ. ಈ ಹಿಂದೆ ಸಿಹಿ ಕಹಿ ಚಂದ್ರು ಅವರ ನಿರೂಪಣೆಯ ‘ಬೊಂಬಾಟ್ ಭೋಜನ’ ಕಾರ್ಯಕ್ರಮಕ್ಕೆ ನಟಿ ಎಂಟ್ರಿ ಕೊಟ್ಟಿದ್ದರು. ತಾಯಿಯಾಗುತ್ತಿರುವ ಸಂತಸವನ್ನು ಹಂಚಿಕೊಂಡಿದ್ದರು.