ನಟಿ ನಯನತಾರ ಬಾಡಿಗೆ ತಾಯ್ತನ ಕೇಸ್​ಗೆ ಸಿಕ್ಕಿತು ರೋಚಕ ಟ್ವಿಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ಇತ್ತೀಚೆಗೆ ಬಾಡಿಗೆ ತಾಯ್ತನ ಮೂಲಕ ಅವಳಿ ಮಕ್ಕಳನ್ನು ಪಡೆದುಕೊಂಡಿದ್ದರು. ಈ ಖುಷಿ ಬಂದ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿತ್ತು.
ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದು ನಿಯಮಗಳ ಪ್ರಕಾರವೇ ಇದೆಯೋ ಇಲ್ಲವೋ ಎಂದು ತಮಿಳು ನಾಡು ಸರ್ಕಾರ ತನಿಖೆಗೆ ಆದೇಶಿಸಿತ್ತು.
ಇದೀಗ ಈ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಈ ಬಗ್ಗೆ ನಯನತಾರಾ ಪ್ರತಿಕ್ರಿಯೆ ನೀಡಿದ್ದಾರೆ.ಬಾಡಿಗೆ ತಾಯಿ ತನ್ನ ಸಂಬಂಧಿ, ನಾವು 6 ವರ್ಷಗಳ ಹಿಂದೆಯೇ ಮದುವೆ ನೋಂದಣಿ ಮಾಡಿಸಿದ್ವಿ ಎಂದು ಸ್ಪಷ್ಟನೆ ನೀಡಿದ್ದಾರೆ.
ನಯನತಾರ ಮತ್ತು ವಿಘ್ನೇಶ್​ ಶಿವನ್​ ಕಾನೂನುಬದ್ಧವಾದ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ದಂಪತಿ ಆರು ವರ್ಷಗಳ ಹಿಂದೆಯೇ ರಿಜಿಸ್ಟ್ರಾರ್​ ಮದುವೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನಾತ್ಮಕ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಇದಿಷ್ಟೇ ಅಲ್ಲದೆ, 2021ರಲ್ಲೇ ಬಾಡಿಗೆ ತಾಯ್ತನ ಒಪ್ಪಂದಕ್ಕೆ ದಂಪತಿ ಸಹಿ ಹಾಕಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಹ ಸಲ್ಲಿಸಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಹೇಳಲಾಗಿದೆ. ಬಾಡಿಗೆ ತಾಯಿ ನಯನತಾರಾ ಅವರ ಸಂಬಂಧಿ ಆಗಿದ್ದು ದುಬೈನಲ್ಲಿ ನೆಲೆಸಿದ್ದಾರೆ. ಅವಳಿ ಮಕ್ಕಳು ಚೆನ್ನೈ ಆಸ್ಪತ್ರೆಯಲ್ಲಿ ಜನಿಸಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಕಳೆದ ಜೂನ್​ 9ರಂದು ಸಾಂಪ್ರದಾಯಿಕವಾಗಿ ಮದುವೆ ನಡೆದಿದ್ದು, 6 ವರ್ಷಗಳ ಹಿಂದೆಯೇ ಇಬ್ಬರು ರಿಜಿಸ್ಟ್ರಾರ್​ ಮದುವೆ ಆಗಿರುವುದಾಗಿ ದಾಖಲೆಗಳು ಹೇಳುತ್ತಿವೆ. ಇದೀಗ ಬಾಡಿಗೆ ತಾಯ್ತನದ ವಿವಾದ ತಾರ್ಕಿಕ ಅಂತ್ಯ ಕಾಣುವಂ ಹಂತಕ್ಕೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!