ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥಕ್ಕೆ ಸ್ಥಳ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Parineeti Chopra) ಮತ್ತು ರಾಜಕಾರಣಿ ರಾಘವ್ ಚಡ್ಡಾ (Raghav Chadha) ಲವ್ವಿ-ಡವ್ವಿ ವಿಚಾರ ಎಲ್ಲಡೆ ಸುದ್ದಿಯಾಗಿತ್ತು.
ಇದೀಗ ಈ ಜೋಡಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ದೆಹಲಿಯಲ್ಲಿ ಈ ವಾರ ಅದ್ದೂರಿ ನಿಶ್ಚಿತಾರ್ಥ ನಡೆಯಲಿದೆ.

ಇತ್ತೀಚಿಗೆ ಲಂಡನ್ ಮತ್ತು ಮುಂಬೈ ಏರ್‌ಪೋರ್ಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರ ಮದುವೆ ಬಗ್ಗೆ ಅದೆಷ್ಟೇ ಚರ್ಚೆ ನಡೆಯುತ್ತಾ ಇದ್ದರೂ ಇಬ್ಬರೂ ಸೈಲೆಂಟ್ ಆಗಿದ್ದಾರೆ.

ಹೀಗಿರುವಾಗ ಈ ವಾರವೇ ದೆಹಲಿಯಲ್ಲಿ ರಾಜಕಾರಣಿ ರಾಘವ್ ಜೊತೆ ಪರಿಣಿತಿ ಎಂಗೇಜ್‌ಮೆಂಟ್ ಫಿಕ್ಸ್ ಆಗಿದೆ. ಅದಕ್ಕಾಗಿ ಈಗಾಗಲೇ ಪರಿಣಿತಿ ಚೋಪ್ರಾ ದೆಹಲಿಗೆ (Dehli) ತೆರಳಿದ್ದಾರೆ. ನಿಶ್ಚಿತಾರ್ಥದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬದ ಆಪ್ತರಷ್ಟೇ ಈವೆಂಟ್‌ನಲ್ಲಿ ಭಾಗಿಯಾಗಲಿದ್ದಾರೆ.

ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್‌ಗೆ ಭಾಗಿಯಾಗಲು ಈಗಾಗಲೇ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ ಮತ್ತು ಮೀರಾ ಚೋಪ್ರಾ ಕೂಡ ದೆಹಲಿಯಲ್ಲಿದ್ದಾರೆ. ಅಧಿಕೃತವಾಗಿ ಈ ಬಗ್ಗೆ ಹೇಳದೇ ಇದ್ದರೂ ಕೂಡ ಪರಿಣಿತಿ-ರಾಘವ್ ನಿಶ್ಚಿತಾರ್ಥದ ಸಿದ್ಧತೆ ತೆರೆಮರೆಯಲ್ಲಿ ಭರದಿಂದ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!