ಕನ್ನಡ ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಪವಿತ್ರಾ ಜಯರಾಂ (35) ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ ಬಳಿಕ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಪವಿತ್ರಾ ಜಯರಂ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.

ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲ್ ಬಳಿ ನಟಿ ಪವಿತ್ರಾ ಅವರ ಕಾರು ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಜೊತೆ ಅವರ ಕುಟುಂಬಸ್ಥರು ಕೂಡ ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಈ ವಿಷಯದ ಕುರಿತು ಹೆಚ್ಚುವರಿ ಮಾಹಿತಿಯನ್ನು ಇನ್ನೂ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!