ಮಹಿಳೆಯರಿಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ: ಪ್ರಜ್ವಲ್ ವಿರುದ್ಧ ನಟಿ ಪೂನಂ ಕೌರ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರ ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಎಲ್ಲರ ಗಮನ ಸೆಳೆದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ದೇಶದಾದ್ಯಂತ ಪ್ರಜ್ವಲ್ ಅವರ ವಿಡಿಯೋಗಳು ಹರಿದಾಡುತ್ತಿವೆ. ಈ ಸಂದರ್ಭದಲ್ಲಿ ಪೂನಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಈತ ಮಹಿಳೆಯರಿಗೆ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. ಸಾವಿರಾರು ವಿಡಿಯೋಗಳು ಶೇರ್ ಆಗುತ್ತಿವೆ. ಹಣ ಮತ್ತು ರಾಜಕೀಯದ ಕಾರಣದಿಂದ ಅವರು ಓಡಿಹೋದರು. ಪ್ರಜ್ವಲ್ ಜರ್ಮನಿಯಲ್ಲಿ ಖುಷಿಯಾಗಿದ್ದಾರೆ. ಇವರಿಗೆ ಶಿಕ್ಷೆ ಆಗಬೇಕು ಎಂದರೆ ಜನರು ತಿರುಗಿ ಬೀಳಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!