ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೇಮಂತ್ ಎಂ.ರಾವ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ಗೆ ದಕ್ಷಿಣ ಚಿತ್ರರಂಗದ ಜನಪ್ರಿಯ ತಾರೆಯ ಪ್ರವೇಶವಾಗಿದೆ.
ಫಸ್ಟ್ ಲುಕ್, ಪೋಸ್ಟರ್ಸ್, ಶೂಟಿಂಗ್, ಮೇಕಿಂಗ್ ವಿಡಿಯೋಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರಕ್ಕೆ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.
ಪೋಸ್ಟರ್ ಹಾಗೂ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಸೆಟ್, ಶೂಟಿಂಗ್ ವಿಚಾರವಾಗಿಯೂ ಸಿನಿಮಾ ಪ್ರೇಮಿಗಳ ಕುತೂಹಲ ಹೆಚ್ಚಿಸಿದೆ.
ತಮ್ಮ ಅಭಿನಯದ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಮೋಹನ್ ಈಗ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಭಾಗವಾಗಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ್, ನಾನಿ, ಧನುಷ್ ಹಾಗೂ ಶಿವಕಾರ್ತಿಕೇಯನ್ ಜೊತೆ ಅಭಿನಯಿಸಿರುವ ಪ್ರಿಯಾಂಕಾ, ಹೇಮಂತ್ ಎಂ ರಾವ್ ನಿರ್ದೇಶನದ 80ರ ದಶಕದ ಬಾಂಡ್- ಸ್ಪೈ ಕಥೆ ಹೊಂದಿರುವ ಚಿತ್ರತಂಡ ಸೇರ್ಪಡೆಗೊಂಡಿದ್ದಾರೆ.

