ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದಕ ವಸ್ತು ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್ ಪ್ರೀತ್ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಸೈಬರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾರ್ಕೋಟಿಕ್ಸ್ ಬ್ಯೂರೋ ಮತ್ತು ರಾಜೇಂದ್ರ ನಗರ ಎಸ್‌ಒಟಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ನಂತರ ಹೈದರಾಬಾದ್ ಪೊಲೀಸರು 199 ಗ್ರಾಂ ಮಾದಕ ವಸ್ತು, 2 ಬೈಕ್, 2 ಪಾಸ್ಪೋರ್ಟ್ ಮತ್ತು 10 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯದಲ್ಲೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಮೂಲಗಳ ಪ್ರಕಾರ, ಅಮನ್ ಪ್ರೀತ್ ನಾಲ್ವರು ನೈಜೀರಿಯನ್ನರಿಂದ ಕೊಕೇನ್ ಖರೀದಿಸುತ್ತಿದ್ದರು. ಈ ವೇಳೆ ಅವರನ್ನ ಬಂಧಿಸಲಾಗಿದೆ. ಇದೇ ವೇಳೆ ಸುಮಾರು 2 ಕೋಟಿ ರೂ. ಮೌಲ್ಯದ 200 ಗ್ರಾಮ್ ಕೊಕೇನ್ ಸಹ ವಶಪಡಿಸಿಕೊಂಡಿದ್ದಾರೆ. ಇದನ್ನು ಅನ್ನು ಅಮತ್ ಪ್ರೀತ್ ಖರೀದಿಸಿದ್ದರು ಎಂದು ಹೇಳಲಾಗಿದೆ.
ಈ ಹಿಂದೆ ಮಾದಕ ವಸ್ತು ಸೇವನೆ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಕುಲ್ ಪ್ರೀತ್ ಸಿಂಗ್ ಸಹ ವಿಚಾರಣೆ ಎದುರಿಸಿದ್ದರು. ಹಲವು ಬಾರಿ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು.