ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿರುವ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಪೊಲೀಸರು 600 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಇನ್ನೂ ಹಲವರು ಪರಾರಿ ಆಗಿದ್ದರು. ಇದೀಗ ಆರೋಪಿಗಳ ವಿರುದ್ಧ ಪೊಲೀಸರು ಬರೋಬ್ಬರಿ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ನಾಲ್ಕನೇ ಎಸಿಜಿಎಂ ನ್ಯಾಯಾಲಯಕ್ಕೆ ಆರೋಪ ಪ್ಟಟಿಯನ್ನು ಸಲ್ಲಿಕೆ ಮಾಡಿದ್ದಾರೆ. ರಾಜೇಶ್, ಓಬಣ್ಣ, ಗಂಗಾಧರ್, ಭುವನ್ಗೌಡ ಸೇರಿದಂತೆ 11 ಜನರ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಹಲವು ನಕಲಿ ಖಾತೆಗಳಿಂದ ರಮ್ಯಾಗೆ ಕೀಳು ಸಂದೇಶಗಳನ್ನು ಕಳಿಸಲಾಗಿತ್ತು. ವೈಯಕ್ತಿಕ ನಿಂದನೆಯನ್ನು ಮಾಡಲಾಗಿತ್ತು. ದರ್ಶನ್ ಪರ ವಹಿಸಿ ಈ ಖಾತೆಗಳಿಂದ ರಮ್ಯಾಗೆ ಸಂದೇಶಗಳನ್ನು ಕಳಿಸಲಾಗಿತ್ತು.
ಪೊಲೀಸರು ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 50 ಸಾಮಾಜಿಕ ಜಾಲತಾಣ ಅಕೌಂಟ್ಗಳನ್ನು ಬಂದ್ ಮಾಡಿಸಿದ್ದರು. ಬಂಧನಕ್ಕೆ ಹೆದರಿ 20ಕ್ಕೂ ಹೆಚ್ಚು ಆರೋಪಿಗಳು ಪರಾರಿ ಆಗಿದ್ದರು. ಕೆಲವು ದಿನಗಳ ಹಿಂದಷ್ಟೆ ಬಂಧಿತ ಆರೋಪಿಗಳು ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇತರೆ ಭದ್ರತೆಗಳನ್ನು ಒದಗಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ.

