ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.
ಚಿನ್ನ ಸಾಗಾಟದ ವೇಳೆ ಪೊಲೀಸರ ಲೋಪದೋಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಿದೆ. ರನ್ಯಾ ರಾವ್ ಚಿನ್ನ ಸಾಗಾಟದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತತೆಯನ್ನು ತಿಳಿಯಲು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.