ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್, ಸಿಎಂ ಸಿದ್ದರಾಮಯ್ಯ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
‘ಕಾಂಗ್ರೆಸ್ ಗೋಲ್ಡ್ ಫೀಲ್ಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಫೋಟೋ ಹಂಚಿಕೊಂಡಿರುವ ಮಾಳವಿಯಾ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಬಾಗಿಲು ತಲುಪಿದೆ. ಈ ದಿನಾಂಕದ ಫೋಟೋದಲ್ಲಿ ಗೃಹ ಸಚಿವ ಜಿ ಪರಮೇಶ್ವರ ಕೂಡ ಇದ್ದಾರೆ ಎಂದಿದ್ದಾರೆ.
ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಚಿವರಿಗೂ ರನ್ಯಾ ರಾವ್‌ಗೂ ನಂಟಿದೆ ಎಂಬ ವಿಚಾರ ತನಿಖೆ ವೇಳೆ ಹೊರಬಿದ್ದಿದೆ. ಇದರ ಈ ಫೋಟೋ ವೈರಲ್ ಹಲವು ಚರ್ಚೆ ಹುಟ್ಟಿಹಾಕಿದೆ.