ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ರಾಯಭಾರಿಯಾಗಿ ನಟಿ ರಶ್ಮಿಕಾ ಮಂದಣ್ಣ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ನಟಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.

ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದು, ‘ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಂ. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ.ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ. ಆ ನಿಮಿತ್ತ ಕಾರ್ಯಯೋಜನೆ ರೂಪಿಸಿದ್ದೆ ಎಂದು ತಮ್ಮ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.ಇದೇ ವೇಳೆ ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದರು.

ಸೈಬರ್ ಕ್ರಿಮಿನಲ್‌ಗಳು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ.ನಾವು ಎಚ್ಚರವಾಗಿರುವುದು ಮಾತ್ರವಲ್ಲದೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳ ವಿರುದ್ಧ ಕೆಲಸ ಮಾಡಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಸೈಬರ್ ಅಪರಾಧಗಳಿಂದ ದೇಶವನ್ನು ರಕ್ಷಿಸಬೇಕು ಎಂದು ಅದು ಹೇಳಿದೆ ಎಂದು ನಟಿ ಹೇಳಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಹಲವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇದಾಗಲೇ ಕೆಲವರಿಗೆ ಈ ಕೆಟ್ಟ ಅನುಭವವಾಗಿದ್ದರೂ, ನಟಿ ರಶ್ಮಿಕಾ ಮಂದಣ್ಣ ಅವರ ಪ್ರಕರಣದಿಂದಾಗಿ ಇದು ಭಾರಿ ಸುದ್ದಿಗೆ ಗ್ರಾಸವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!