ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೊ: ದೆಹಲಿ ಪೊಲೀಸರಿಂದ ವರದಿ ಕೇಳಿದ ಮಹಿಳಾ ಆಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವಕುರಿತು ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು), ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಶುಕ್ರವಾರ ನೋಟಿಸ್‌ ನೀಡಿದೆ.

ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಆಧರಿಸಿ ಡಿಸಿಡಬ್ಲ್ಯುವರದಿ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ಬಗ್ಗೆ ರಶ್ಮಿಕಾ ಅವರೇ ಕಳವಳ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದರೂ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ’ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಎಫ್‌ಐಆರ್‌ನ ಪ್ರತಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿರುವ ಡಿಸಿಡಬ್ಲ್ಯು, ಇದೇ 17ರೊಳಗೆ ಆರೋಪಿಗಳ ಮಾಹಿತಿ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹೇಳಿದೆ.
‘ಕೃತಕ ಬುದ್ಧಿಮತ್ತೆ (ಎ.ಐ) ಬಳಸಿ ನಟಿಯ ಡೀಪ್‌ಫೇಕ್ ವಿಡಿಯೊ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಡಿಸಿಡಬ್ಲ್ಯು ಅಧ್ಯಕ್ಷೆ ಸ್ವಾತಿ ಮಳಿವಾಲ್ ಸಾಮಾಜಿಕ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!